ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಆರೋಗ್ಯ / ಪೌಷ್ಟಿಕತೆ / ಅಪೌಷ್ಟಿಕತೆ ನಿವಾರಣೆ
ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಅಪೌಷ್ಟಿಕತೆ ನಿವಾರಣೆ

ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿಯಲ್ಲಿ ಅಪೌಷ್ಟಿಕತೆ ವಿರುದ್ಧ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಆಂದೋಲನವನ್ನು ಆರಂಭಿಸಿದೆ.

“ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆಯನ್ನು ಸಂಪೂರ್ಣವಾಗಿ ತೊಡೆದುಹಾಕುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿಯಲ್ಲಿ ಅಪೌಷ್ಟಿಕತೆ ವಿರುದ್ಧ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಆಂದೋಲನವನ್ನು ಆರಂಭಿಸಿದೆ.

ಅಪೌಷ್ಠಿಕತೆ ನಿವಾರಣೆಗೆ ಸರ್ಕಾರದ ಕ್ರಮಗಳು

ರಾಜ್ಯದಲ್ಲಿ ಅಪೌಷ್ಠಿಕತೆಯಿಂದ  ಬಳಲುತ್ತಿರುವ ಮಕ್ಕಳ ಸಮಸ್ಯೆ ಹಾಗೂ ಅದನ್ನು ನಿವಾರಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಶಿಫಾರಸ್ಸುಗಳನ್ನು ಸಲ್ಲಿಸಲು ರಾಜ್ಯ ಹೈಕೋರ್ಟ್ ನೇಮಿಸಿದ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯ ಸಮಿತಿ ನೀಡಿದ ಮಾರ್ಗದರ್ಶನದಂತೆ ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಹೆವ್ವು ತೊಂದರೆಗೊಳಗಾಗಿರುವ ಆರು ವರ್ಷದೊಳಗಿನ ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಚಿಕೆತ್ಸೆ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಳೆದ ಫೆಬ್ರವರಿಯಲ್ಲಿ ಆದೇಶವೊಂದನ್ನು ಹೊರಪಡಿಸಿತು. ಈ ಆದೇಶದನ್ವಯ ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ 47355 ಅತಿ ಕಡಿಮೆ ತೂಕದ ಮಕ್ಕಳಿಗೆ ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಯೋಗದೊಂದಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ಮಕ್ಕಳಲ್ಲಿ 42,108 ಮಕ್ಕಳಿಗೆ ಹೊರ ರೋಗಿಗಳ ಚಿಕಿತ್ಸೆ ನೀಡಲಾಯಿತು. 991 ಮಕ್ಕಳಿಗೆ ಬಾಲ-ಸಂಜೀವಿನಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಯಿತು.


ಅಪೌಷ್ಠಿಕತೆ ನಿವಾರಣೆ
;

ನಂತರ ಮೇ 14ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖೆ ಉಪ ನಿರ್ದೇಶಕ್ರು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಈ ವಿಡಿಯೋ ಕಾನ್ಫರೆನ್ಸ್ ಮೇ 31ರೊಳಗೆ ಮತ್ತೊಮ್ಮೆ ಆರು ವರ್ಷದೊಳಗಿನ ಅಪೌಷ್ಠಿಕ ಮಕ್ಕಳ ತಪಾಸಣೆ ನಡೆಸಿ ಚಿಕಿತ್ಸೆ ನೀಡುವಂತೆ ಸೂಚಿಸಲಾಯಿತು.

ಈ ಸೂಚನೆಯನ್ವಯ ಎರಡಾನೇ ಸುತ್ತಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ 53,488 ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು. ಇವರಲ್ಲಿ 2,509 ಮಕ್ಕಳಿಗೆ ಬಾಲ ಸಂಜೀವಿನಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಯಿತು. 1,021 ಮಕ್ಕಳಿಗೆ ಪುನಶ್ಚೇತನ ಕೇಂದ್ರಗಳಲ್ಲಿ ಚಿಕಿತ್ಸೆ ಕೊಡಲಾಯಿತು.

ಈ ವಿವರಗಳನ್ನು ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಸಮಿತಿ ಹೈಕೋರ್ಟ್ ಗೆ ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ನೀಡಿತು. ವರದಿಯನ್ನು ಪರಿಶೀಲಿಸಿದ ನ್ಯಾಯಲಯ 26.06.2012 ರಂದು ನೀಡಿದ ಆದೇಶದಲ್ಲಿ ಆರೋಗ್ಯ ತಪಾಸಣೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ ಮಕ್ಕಳಿಗೆ ಮಾತ್ರ ನಡೆಸಲಾಗಿದೆ. ಅಂಗನವಾಡಿ ಕೇಂದ್ರಗಳಿಂದ ಹೊರಗಿರುವ ಮಕ್ಕಳಿಗೆ ಈ ತಪಾಸಣೆ ನಡೆದಿಲ್ಲ ಎಂದು ಹೇಳಿತು. ಹಾಗಾಗಿ ರಾಜ್ಯದಲ್ಲಿ ಅಂಗನವಾಡಿಯಿಂದ ಹೊರಗಿರುವ ಆರು ವರ್ಷದ ಎಲ್ಲಾ ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆಯನ್ನು ಜುಲೈ 15 ರಂದು ನಡೆಸಲು ತಿಳಿಸಿದೆ.

ನಿಮ್ಮ ಹತ್ತಿರದ ಅಂಗನವಾಡಿ ಅಥವಾ ಶಾಲೆಗೆ ಆರು ವರ್ಷದೊಳಗಿನ ಎಲ್ಲ ಮಕ್ಕಳನ್ನು ಕರೆದುಕೊಂಡು ಹೋಗಿ, ಆರೋಗ್ಯ ತಪಾಸಣೆ ಮಾಡಿಸಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಕುರಿತು ಹೆಚ್ಚಿನ ಮಾಹಿತಿಯನ್ನು ಆಶಾ, ಅಂಗನವಾಡಿ ಕಾರ್ಯಕರ್ತೆ ಅಥವಾ ಆರೋಗ್ಯ ಸಹಾಯಕರಿಂದ ಪಡೆಯಬಹುದು.

ಮೂಲ:ಪೋರ್ಟಲ್ ತಂಡ
2.9797979798
virupakshi Feb 29, 2016 02:20 PM

ಸೂಪರ್

ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top