ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಸಮಾಜ ಕಲ್ಯಾಣ / ಸೇವೆಗಳು / ವಿಕಲಚೇತನರಿಗೆ ಸಂಬಂಧಿಸಿದ ಯೋಜನೆಗಳ ಸೇವೆಗಳು / ಉನ್ನತ ಶಿಕ್ಷಣ ಪಡೆಯುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಯೋಜನೆ
ಹಂಚಿಕೊಳ್ಳಿ

ಉನ್ನತ ಶಿಕ್ಷಣ ಪಡೆಯುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಯೋಜನೆ

ಉನ್ನತ ಶಿಕ್ಷಣ ಪಡೆಯುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಯೋಜನೆ

ಸೇವೆ ಆಯ್ಕೆ ಉನ್ನತ ಶಿಕ್ಷಣ ಪಡೆಯುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಯೋಜನೆ
ಸೇವೆ ಪೂರೈಕೆದಾರರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಈ ಸೇವೆ ಪಡೆಯಲು ಅರ್ಹತೆಗಳು 1.ವಿದ್ಯಾರ್ಥಿಯು ಭಾರತದ ನಾಗರಿಕರಾಗಿರಬೇಕು. ಅವರು ಕರ್ನಾಟಕದಲ್ಲಿ ಕಳೆದ 5 ವರ್ಷಗಳಿಂದ ವಾಸವಾಗಿದ್ದು, ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
2.ವಿದ್ಯಾರ್ಥಿಯು ಸರ್ಕಾರದ ಅಧ್ಯಯನ/ಸ್ಥಳೀಯ ಸಂಸ್ಥೆ/ಸರ್ಕಾರದ ಅನುದಾನ ಪಡೆಯದೆ ಇದಲ್ಲಿ. ಈ ಯೋಜನೆಗೆ ಅರ್ಹರಾಗುತ್ತಾರೆ.
3.ಅಂಗವಿಕಲ ವಿದ್ಯಾರ್ಥಿಗಳು ಉಚಿತ ಶಿಕ್ಷಣ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಲ್ಲ.
4.ಕನಿಷ್ಠ 40% ವಿಕಲಚೇತನತೆ ಹೊಂದಿರಬೇಕು
5.ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜು/ಸಂಸ್ಥೆಯ ಮುಖ್ಯಸ್ಥರ ಮೂಲಕ ನಿಗದಿತ ಅರ್ಜಿ ಸಲ್ಲಿಸಬೇಕು
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ
ದಾಖಲೆಗಳ ವಿವರಗಳು
1.  ಪೋಷಕರ ದೃಢೀಕರಣ
2.  ಹಿಂದಿನ ವರ್ಷದ ಅಂಕ ಪಟ್ಟಿ
3.  ಆಧಾರ್ ಕಾರ್ಡ್
4.  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಾವತಿಸಿದ ಮೂಲ ರಸೀದಿ
5.  ವಿಕಲಚೇತನರ ಗುರುತಿನ ಚೀಟಿ
6.  ಶಾಲೆಯ ಮುಖ್ಯೋಪಧ್ಯಾಯರು/ ಕಾಲೇಜಿನ ಪ್ರಾಂಶುಪಾಲರಿಂದ ವಿದ್ಯಾರ್ಥಿಯ ಬಗ್ಗೆ ದೃಢೀಕರಣ
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) ಇಲ್ಲ
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 90 days
ಸೇವೆ ಪ್ರಕ್ರಿಯೆ
ಪ್ರಕ್ರಿಯೆ
1.   ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಲಾಗ್ ಇನ್ ಆಗುವುದು
2.  ಮುಖ್ಯೋಪಾಧ್ಯಾಯರು ಮುಖಪುಟದಲ್ಲಿರುವ ಮುಖ್ಯೋಪಾಧ್ಯಾಯರ/ಪ್ರಾಂಶುಪಾಲರ ಘೋಷಣ ಪತ್ರವನ್ನು ಡೌನ್ಲೋಡ್ ಮಾಡಿ ವಿವರಗಳನ್ನು ಬರೆದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗಿದ್ದು, ಸಹಿ ಕಡ್ಡಾಯವಾಗಿರುತ್ತದೆ.
3.  ನ೦ತರ, ಅರ್ಜಿದಾರರು ತಮ್ಮ ವ್ಯಯಕ್ತಿಕ ಮೊಬೈಲ್ ಸಂಖ್ಯೆಯನ್ನು ನಮೂದಿಸಿದಾಗ ಓಟಿಪಿ ಸಂಖ್ಯೆಯು ಅವರ ಮೊಬೈಲಿಗೆ ಸಂದೇಶ ಬರುವುದು, ಸದರಿ ಓಟಿಪಿ ಸಂಖ್ಯೆಯನ್ನು ನಮೂದಿಸಿದಾಗ ಅರ್ಜಿದಾರರು ಬಯಸಿದ ಸೇವೆಯ ಅರ್ಜಿಯ ಪುಟ ಅನಾವರಣಗೊಳ್ಳುವುದು
4.  ಮನವಿದಾರರು ಸದರಿ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಕಂಡಿಕೆಯಲ್ಲಿ ತುಂಬುವುದು ನಂತರ ಉಳಿಸು ಎಂಬುದನ್ನು ಕ್ಲಿಕ್ ಮಾಡುವುದು
5.  ಅರ್ಜಿ ಸಲ್ಲಿಸಿದ ನಂತರ ಒಂದು ಸ್ವೀಕೃತಿ ಸಂಖ್ಯೆಯು ಸಿಗುತ್ತದೆ
6.   ಅರ್ಜಿಯು ವಿಷಯನಿರ್ವಾಹಕರಿಗೆ ಹೋಗುತ್ತದೆ. ನಂತರ ವಿಷಯ ನಿರ್ವಾಹಕರು ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸುವರು
7.  ಕೇಸ್ ವರ್ಕರ್ ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸಲು
8.  ವಿಷಯ ನಿರ್ವಾಹಕರು ಅರ್ಜಿಗಳನ್ನು ಪರಿಶೀಲಿಸಿ, ಅಭಿಪ್ರಾಯದೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ
9.  DDWO ಎಲ್ಲಾ ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ, ಸರಿಯಾಗಿದ್ದರೆ, ಒಪ್ಪಿಗೆ ಸೂಚಿಸುತ್ತಾರೆ
10.  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವರು
11.  ಖಜಾನೆಯಿಮದ ಹಣವನ್ನು ಸೆಳೆದು ಆ.ಟಿ.ಜಿ.ಎಸ್/ಎನ್.ಇ.ಎಫ್.ಟಿ ಮೂಲಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು
ಆನ್ಲೈನ್ ಪಾವತಿ ಮಾಡುವ ಮುಂಚಿತವಾಗಿ ದಯವಿಟ್ಟು ಅರ್ಜಿ ಮತ್ತು ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಸಿದ್ಧಪಡಿಸಿಕೊಳ್ಳಿ

ಮೂಲ : ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಾಬರಿಕಾರಣ ಇಲಾಖೆ

3.27777777778
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top