ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ

ವೈದ್ಯಕೀಯ ಪರಿಹಾರ ನಿಧಿ ಯೋಜನೆ

ವೈದ್ಯಕೀಯ ಪರಿಹಾರ ನಿಧಿ ಯೋಜನೆ

ಸೇವೆ ಆಯ್ಕೆ ವೈದ್ಯಕೀಯ ಪರಿಹಾರ ನಿಧಿ ಯೋಜನೆ
ಸೇವೆ ಪೂರೈಕೆದಾರರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಈ ಸೇವೆ ಪಡೆಯಲು ಅರ್ಹತೆಗಳು ಕನಿಷ್ಠ 40% ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ವಿಕಲಚೇತನತೆಯನ್ನು ಕಡಿಮೆ/ಗುಣ ಪಡಿಸಲು ಈ ಯೋಜನೆಯು ಅನ್ವಯಿಸುವುದು.
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ
ದಾಖಲೆಗಳ ವಿವರಗಳು
1.  ಪರಿಣಿತ ವೈದ್ಯಕೀಯ ಅಧಿಕಾರಿಗಳಿಂದ ಅಂಗವಿಕಲತೆಯನ್ನು ಸರಿಪಡಿಸುವ/ಕಡಿಮೆ ಮಾಡುವ ಬಗ್ಗೆ ಪ್ರಮಾಣ ಪತ್ರವನ್ನು ಪಡೆದು ಲಗತ್ತಿಸುವುದು
2.  ಆಧಾರ್ ಕಾರ್ಡ್
3.  ಶಸ್ತ್ರ ಚಿಕಿತ್ಸೆಯ ತಗುಲಿದ ವೆಚ್ಚದ ಮೂಲ ಬಿಲ್ಲುಗಳು ಹಾಗೂ ಡಿಸ್ಚಾರ್ಜ್ ಸಮರಿ
4.  ವಿಕಲಚೇತನರ ಗುರುತಿನ ಚೀಟಿ
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) ಇಲ್ಲ
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 1 Month
ಸೇವೆ ಪ್ರಕ್ರಿಯೆ
ಪ್ರಕ್ರಿಯೆ
1.   ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಲಾಗ್ ಇನ್ ಆಗುವುದು
2.  ನ೦ತರ, ಅರ್ಜಿದಾರರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ನಮೂದಿಸಿದಾಗ ಓಟಿಪಿ ಸಂಖ್ಯೆಯು ಅವರ ಮೊಬೈಲಿಗೆ ಸಂದೇಶ ಬರುವುದು, ಸದರಿ ಓಟಿಪಿ ಸಂಖ್ಯೆಯನ್ನು ನಮೂದಿಸಿದಾಗ ಅರ್ಜಿದಾರರು ಬಯಸಿದ ಸೇವೆಯ ಅರ್ಜಿಯ ಪುಟ ಅನಾವರಣಗೊಳ್ಳುವುದು
3.  ಮನವಿದಾರರು ಸದರಿ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಕಂಡಿಕೆಯಲ್ಲಿ ತುಂಬುವುದು ನಂತರ ಉಳಿಸು ಎಂಬುದನ್ನು ಕ್ಲಿಕ್ ಮಾಡುವುದು
4.  ಅರ್ಜಿ ಸಲ್ಲಿಸಿದ ನಂತರ ಒಂದು ಸ್ವೀಕೃತಿ ಸಂಖ್ಯೆಯು ಸಿಗುತ್ತದೆ
5.   ಅರ್ಜಿಯು ವಿಷಯನಿರ್ವಾಹಕರಿಗೆ ಹೋಗುತ್ತದೆ. ನಂತರ ವಿಷಯ ನಿರ್ವಾಹಕರು ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸುವರು
6.  ಕೇಸ್ ವರ್ಕರ್ ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸಲು
7.  ವಿಷಯ ನಿರ್ವಾಹಕರು ಅರ್ಜಿಗಳನ್ನು ಪರಿಶೀಲಿಸಿ, ಅಭಿಪ್ರಾಯದೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ
8.  DDWO ಎಲ್ಲಾ ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ, ಸರಿಯಾಗಿದ್ದರೆ, ಒಪ್ಪಿಗೆ ಸೂಚಿಸುತ್ತಾರೆ
9.  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ, ಮಂಜೂರಾತಿಗಾಗಿ ಜಿಲ್ಲಾ ಮಟ್ಟದ ಸಮಿತಿಯ ಮುಂದೆ ಅನುಮೋದನೆಗಾಗಿ ಅರ್ಜಿಗಳನ್ನು ಮಂಡಿಸುವರು
10.  ಸಮಿತಿಯ ಅನುಮೋದನೆ ನಂತರ, ಸಂಬಂಧಿಸಿದ ಆಸ್ಪತ್ರೆಗೆ ಅನುದಾನ ಬಿಡುಗಡೆ ಮಾಡಲಾಗುವುದು

ಮೂಲ : ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಾಬರಿಕಾರಣ ಇಲಾಖೆ

3.02702702703
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top