অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಮಖಾನಾ

ಮಖಾನಾ

ಮಖಾನಾ ಒಂದು ವಿಶಿಷ್ಟ ಬೆಳೆ. ಇದನ್ನು ಬೆಳೆಯಲು ನೀರಿನ ಆಧಾರ ಬೇಕು. ನೀರಿರುವ ಹೊಂಡ ಬೇಕು. ಪ್ರತಿ ವರ್ಷದ ಡಿಸೆಂಬರ್‌ಜನವರಿ ಬೀಜವನ್ನು ಬಿತ್ತಬೇಕಾದ ಸಮಯ. ಸುಮಾರು ಐದು ಅಡಿ ಆಳದ ನೀರಿನ ಹೊಂಡದಲ್ಲಿ ಒಂದರಿಂದ ಒಂದೂವರೆ ಮೀಟರ್‌ ಅಂತರದಲ್ಲಿ ಬೀಜವನ್ನು ಬಿತ್ತಬೇಕು. ಒಂದು ಹೆಕ್ಟೇರ್‌ ಅಂದರೆ ಎರಡೂವರೆ ಎಕರೆ ವ್ಯಾಪ್ತಿಯ ಹೊಂಡಕ್ಕೆ 80 ಕೆ.ಜಿ. ತೂಕದ ಬೀಜ ಬೇಕಾಗುತ್ತದೆ. ಹೊಂಡದ ಅಗಲ ರೈತನ ಅಗತ್ಯತೆ, ಲಭ್ಯತೆಯನ್ನು ಆಧರಿಸಿರುತ್ತದೆ.


ಬಿತ್ತನೆಗೆ ಮುನ್ನ ಬೀಜೋಪಚಾರ ನಡೆಸುವುದು ಕ್ಷೇಮ. ಇದರಿಂದ ಮೊಳಕೆಯ ಶೇಕಡಾವಾರು ಪ್ರಮಾಣ ಹೆಚ್ಚುವುದು ಖಚಿತ. ಜಾ ಹೇಳುತ್ತಾರೆ, ಬಿತ್ತನೆಗೆ ಮುನ್ನ ಒಂದು ವಾರ ಕಾಲ ಒದ್ದೆ ಮಾಡಿದ ಸೆಣಬಿನ ದಾರದ ಚೀಲದಲ್ಲಿ ಬೀಜವನ್ನು ಇರಿಸಿರುತ್ತೇನೆ. ಇದರಿಂದ ಫಲವತ್ತತೆ ಹೆಚ್ಚುತ್ತದೆ.


ಮಖಾನಾ ನೀರಿನೊಳಗೇ ಗಿಡವಾಗಿ ಬೆಳೆಯುತ್ತದೆ. ಏಪ್ರಿಲ್‌ ವೇಳೆಗೆ ಮಖಾನಾ ಹೂವು ಹೊರಗೆ ಬಂದು ನೀರಿನ ಮೇಲೆ ಹರಡಿಕೊಳ್ಳುತ್ತದೆ. ಪರಾಗ ಸ್ಪರ್ಶವನ್ನು ಪ್ರಕೃತಿ ನಡೆಸುವ ಕಾರಣದಿಂದಾಗಿ ವಾತಾವರಣಕ್ಕೆ ತೆರೆದುಕೊಳ್ಳುತ್ತದಿರಬೇಕು. ನಂತರದ 3-4 ದಿನಗಳಲ್ಲಿ ಮತ್ತೆ ನೀರಿನೊಳಗೆ ಮಖಾನಾ ಮಾಯ!
ಸಾಮಾನ್ಯವಾಗಿ ಜೂನ್‌ ಜುಲೈ ಸಮಯದಲ್ಲಿ ಹಣ್ಣುಗಳು ಸೃಷ್ಟಿಯಾಗುತ್ತವೆ. ಕೇವಲ 24ರಿಂದ 48 ತಾಸು ನೀರಿನ ಮೇಲೆ ಅವು ತೇಲಾಡುತ್ತವೆ. ಮತ್ತೆ ನೀರಿನಲ್ಲಿ ಹಣ್ಣು ಮುಳುಗುತ್ತವೆ! ಅದರ ಬೀಜಗಳನ್ನು ಸೆಪ್ಟೆಂಬರ್‌ ಅಕ್ಟೋಬರ್‌ ಅವಧಿಯಲ್ಲಿ ಹೊಂಡಗಳಿಂದ ಸಂಗ್ರಹಿಸಬೇಕಾಗುತ್ತದೆ.


ಬೀಜಗಳ ಸಂಗ್ರಹದ ನಂತರ ಸಂಸ್ಕರಣೆ ನಡೆಸಬೇಕು. ಬೀಜಗಳನ್ನು ಸೂರ್ಯನ ಶಾಖಕ್ಕೆ ಒಡ್ಡಿ ಒಣಗಿಸಿದ ನಂತರ ಗಾತ್ರದ ಆಧಾರದಲ್ಲಿ ವರ್ಗೀಕರಣ ನಡೆಸಬೇಕಾಗುತ್ತದೆ. ಒಣಗಿಸುವ ಪ್ರಕ್ರಿಯೆಗೆ ನಾನಾ ವಿಧದ ಆಧುನಿಕ ತಂತ್ರಜ್ಞಾನಗಳನ್ನು ಬಳಸಬಹುದು.


ಕರ್ನಾಟಕದಲ್ಲಿ ಈ ಬೆಳೆ ಹೊಂದಿಕೊಂಡೀತೆ? ಮಿಲಿಯನ್‌ ಡಾಲರ್‌ ಪ್ರಶ್ನೆ. ಹವಾಮಾನಗಳನ್ನು ಅಧ್ಯಯನ ನಡೆಸಿರುವವರು ಹೇಳುವ ಪ್ರಕಾರ ಸಮಸ್ಯೆ ಇಲ್ಲ. ಚುರುಮುರಿಯಾಗಿ, ಕಾರ್ನ್‌ ಆಗಿ ಮೌಲ್ಯವರ್ಧನೆ ನಡೆಸಬಹುದಾದ ಮಖಾನಾಕ್ಕೆ ಒಳ್ಳೆಯ ದರವೂ ಸಿಕ್ಕೀತು. ನೀರಿನಡಿಯೇ ಬೆಳೆಯುವುದರಿಂದ ದೊಡ್ಡ ಪ್ರಮಾಣದ ಶತ್ರುಗಳು, ರೋಗಗಳು ಎದುರಾಗಲಿಕ್ಕಿಲ್ಲ. ಮುಖ್ಯವಾದುದೆಂದರೆ, ನೀರು ಸಮೃದ್ಧ ಇರಬೇಕು. ನೀರಿನಲ್ಲಿ ಪರ್ಯಾಯ ಬೆಳೆ ಅರ್ಥಾತ್‌ ಮೀನು ಸಾಕಾಣಿಕೆಯಂತದು ಸಾಧ್ಯವೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ. ಹೊಂಡಗಳಿಂದ ಬಿಳಿಯದಾದ ಚಿಕ್ಕದಾದ ಮಖಾನಾ ಬೀಜಗಳನ್ನು ಆಯುವುದು ತ್ರಾಸವಾದೀತು. ಬೆಳಗಿನ ಜಾವ ಕೃಷಿಕರು ಕೃತಕ ಪರಾಗಸ್ಪರ್ಶ ನಡೆಸಿ ವೆನಿಲ್ಲಾ ಕೋಡುಗಳನ್ನು ಬೆಳೆದಿದ್ದಾರೆಂದ ಮೇಲೆ ಇದು ಯಾವ ಲೆಕ್ಕ?
ಇಂದು ಕೇದಾರ್‌ನಾಥ್‌ ಜಾ 20-25 ಸಾವಿರ ರೂ. ಖರ್ಚು ಮಾಡಿ ಹೆಕ್ಟೇರ್‌ಗೆ 40ರಿಂದ 50 ಸಾವಿರದ ನಿವ್ವಳ ಆದಾಯ ಪಡೆಯುತ್ತಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ಮಖಾನಾದ ಪರಿಷ್ಕರಣೆಗೆ ಆಧುನಿಕ ಕಾರ್ಖಾನೆ ಸ್ಥಾಪನೆಯಾಗಿದೆ. ಬಿಹಾರದ ಎಂಟು ಜಿಲ್ಲೆಗಳ ಸಣ್ಣ ಪುಟ್ಟ ರೈತರು ಬೆಳೆದದ್ದನ್ನು ಖರೀದಿಸಲು ಸತ್ಯಜೀತ್‌ ಕುಮಾರ್‌ ಸಿಂಗ್‌ ಎಂಬಾತ 70 ಕೋಟಿ ಬಂಡವಾಳದ ಈ ಕಾರ್ಖಾನೆ ಸ್ಥಾಪಿಸಿದ್ದಾರೆ. ಖುದ್ದು ಜಾರಂತ ದೊಡ್ಡ ರೈತರು ಹೆಕ್ಟೇರ್‌ಗೆ ಒಂದರಿಂದ ಒಂದೂವರೆ ಟನ್‌ ಮಖಾನಾ ಬೆಳೆಯುತ್ತಾರೆ. ಇನ್ನೂ ವಾರ್ಷಿಕ 400ರಿಂದ 500 ಕೋಟಿ ರೂಪಾಯಿ ಮೌಲ್ಯದ ಮಖಾನಾಕ್ಕೆ ಬೇಡಿಕೆಯಿದೆಯೆಂದು ಆಹಾರ ತಜ್ಞರು ಹೇಳುತ್ತಾರೆ.


ನಮ್ಮ ರೈತರಿಗೆ ಅವಕಾಶವಂತೂ ಇದೆ. ಇನ್ನಷ್ಟು ಅಧ್ಯಯನದ ಅಗತ್ಯವೂ ಕಾಣುತ್ತದೆ. 2002ರಲ್ಲಿಯೇ ಭಾರತ ಸರ್ಕಾರದ ಕೃಷಿ ಸಂಶೋಧನಾಲಯ ಮಖಾನಾದ ರಾಷ್ಟ್ರೀಯ ಸಂಶೋಧನಾ ಕೇಂದ್ರವನ್ನು ದರ್ಬಾಂಗ್‌ನಲ್ಲಿ ತೆರೆದಿದೆ. ರೈತ ಕೇದಾರ್‌ನಾಥ್‌ ಅವರ ಮೊಬೈಲ್‌ 09939037453 ಅಥವಾ 09934911553

ಮೂಲ : ರೈತಾಪಿ

ಕೊನೆಯ ಮಾರ್ಪಾಟು : 2/19/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate