ಉತ್ಪಾದನಾ ವೆಚ್ಹ ಕಡಿಮೆ ಮಾಡುವುದು, ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವು ಮಾಡುವುದು, ಉತ್ಪಾದಕತೆ ಹೆಚ್ಚಿಸುವುದು ಮತ್ತು ಕೃಷಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಕೃಷಿ ಯಾಂತ್ರೀಕರಣ ಯೋಜನೆಯ ಮುಖ್ಯ ಉದ್ಧೇಶಗಳು. ಕೃಷಿ ಇಲಾಖೆಯಲ್ಲಿ ಭೂಮಿ ಸಿದ್ಧತೆಯಿಂದ ಕೊಯ್ಲಿನವರೆಗೂ ವಿವಿಧ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲಾಗುತ್ತಿದೆ.