ಹಸಿರೆಲೆ ಗೊಬ್ಬರದ ವಿಶೇಷ ಗುಣಗಳು
ಹಸಿರೆಲೆ ಗೊಬ್ಬರದ ಸಸ್ಯಗಳು ತ್ವರಿತವಾಗಿ ಬೆಳೆದು ಕಡಿಮೆ ಅವಧಿಯಲ್ಲಿ ಹೆಚ್ಚು ಸೊಪ್ಪನ್ನು ಕೊಡುವಂತಿರಬೇಕು.
- ಕಡಿಮೆ ನಾರಿನಿಂದ ಕೂಡಿದ್ದು ಮಣ್ಣಿನಲ್ಲಿ ಸೇರಿಸಿದಾಗ ಸುಲಭವಾಗಿ ಹಾಗೂ ಶೀಘ್ರವಾಗಿ ಕೊಳೆಯುವಂತಿರಬೇಕು.
- ಕಡಿಮೆ ಫಲವತ್ತತೆಯಿರುವ ಭೂಮಿಯಲ್ಲೂ, ಶುಷ್ಕ ವಾತಾವರಣದಲ್ಲೂ ಅಲ್ಪ ಪ್ರಮಾಣದಲ್ಲಿ ನೀರನ್ನು ಬಳಸಿಕೊಂಡು ಹುಲುಸಾಗಿ ಬೆಳೆಯುವಂತಿರಬೇಕು.
- ಆಳವಾಗಿ ಬೇರು ಬಿಡುವ, ಮಣ್ಣಿನ ಕೆಳಪದರಗಳಿಂದ ನೀರು ಹಾಗೂ ಪೋಷಕಾಂಶಗಳನ್ನು ಉಪಯೋಗಿಸಿಕೊಂಡು ಬೆಳೆಯುವ ಗುಣವಿರಬೇಕು.
- ದ್ವಿದಳ ಧಾನ್ಯ ವರ್ಗಕ್ಕೆ ಸೇರಿದ್ದು ವಾತಾವರಣದಲ್ಲಿರುವ ಸಾರಜನಕವನ್ನು ಸ್ಥೀರೀಕರಿಸುವಂಥ ಗುಣವುಳ್ಳದ್ದಾಗಿರಬೇಕು. ಅಲ್ಲದೆ ಬೇರಿನಲ್ಲಿ ಹಚ್ಚು ಸಾರಜನಕವನ್ನು ಕೂಡಿಡುವ ಶಕ್ತಿ ಹೊಂದಿರಬೇಕು.
- ಬಹಳ ಉಪಯೋಗಿ ಬೆಳೆಯಾಗಿರಬೇಕು.
- ನೆರಳಿನಲ್ಲಿ ಬೆಳೆಯುವ ಹಾಗೂ ಹವಾಮಾನ ವೈಪರೀತ್ಯಗಳನ್ನು ತಡೆದುಕೊಳ್ಳುವ ಗುಣವಿರಬೇಕು.
- ಯಾವುದೇ ಕಾಲದಲ್ಲೂ ಹುಲುಸಾಗಿ ಬೆಳೆಯುವ ಗುಣ ಮತ್ತು ಹೆಚ್ಚು ಬೀಜವನ್ನು ಕೊಡುವ ಸಸ್ಯವಾಗಿರಬೇಕು.
- ರಾಸಾಯನಿಕ ಗೊಬ್ಬರಗಳ ಪ್ರಮಾಣ ಕಡಿಮೆ ಕೊಟ್ಟರೂ ಬೆಳೆಯ ಇಳುವರಿಯ ಪ್ರಮಾಣ ಕಡಿಮೆಯಾಗದಿರಬೇಕು.
- ಜಾನುವಾರುಗಳಿಗೆ ಒಳ್ಳೆಯ ಮೇವನ್ನು ಒದಗಿಸುವಂತಿರಬೇಕು.
ಮೇಲೆ ಹೇಳಿದ ಎಲ್ಲಾ ಗುಣಗಳು ಒಂದೇ ವರ್ಗದ ಸಸ್ಯದಲ್ಲಿ ಇರುವುದು ದುರ್ಲಭ. ಆದ್ದರಿಂದ ಹಸಿರೆಲೆ ಗೊಬ್ಬರದ ಬೆಳೆಯನ್ನು ಆಯ್ಕೆ ಮಾಡುವಾಗ ಸ್ಥಳೀಯ ಸನ್ನಿವೇಶದಲ್ಲಿ ಚೆನ್ನಾಗಿ ಬೆಳೆಯುವ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ.
ಮೂಲ :ದೂರ ಶಿಕ್ಷಣ ಘಟಕ,ವಿಸ್ತರಣಾ ನಿರ್ದೇಶನಾಲಯ, ಹೆಬ್ಬಾಳ,ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ. ಬೆಂಗಳೂರು.
ಕೊನೆಯ ಮಾರ್ಪಾಟು : 1/28/2020
0 ರೇಟಿಂಗ್ಗಳು ಮತ್ತು 0 ಕಾಮೆಂಟ್ಗಳು
ಸ್ಟಾರ್ಗಳನ್ನು ಜಾರಿಸಿ ನಂತರ ಕ್ಲಿಕ್ ಮಾಡಿ
© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.