ದೇಶದ ಮತ್ತು ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಉಪಯೋಗಿಸಿಕೋ0ಡು ಉತ್ತಮ ಪೌಷ್ಠಿಕ ಆಹಾರವಾದ ಮೀನನ್ನು ಉತ್ಪಾದಿಸಿ ಮೀನುಗಾರರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮಟ್ಟ ಅಭಿವೃದ್ಧಿಪಡಿಸುವಲ್ಲಿ ಮೀನುಗಾರಿಕೆಯು ಮುಖ್ಯ ಪಾತ್ರ ವಹಿಸುತ್ತದೆ. ಇದು ಒಂದು ಲಾಭದಾಯಕ ಉದ್ಯಮವಾಗಿದ್ದು, ಗಣನೀಯ ಪ್ರಮಾಣದಲ್ಲಿ, ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಮೀನುಗಾರಿಕೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀನುಗಾರಿಕೆ ಇಲಾಖೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ, ಕರ್ನಾಟಕ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ಹಾಗೂ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿಗಳ ಸಹಯೋಗದೊಂದಿಗೆ ರಾಜ್ಯವಲಯದ ಯೋಜನೆ, ಜಿಲ್ಲೆ ವಲಯದ ಜಿಲ್ಲೆ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಮೀನುಗಾರಿಕೆ ಇಲಾಖೆಯ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು