ಪ್ರಾಥಮಿಕ ಶಿಕ್ಷಣ ನೀತಿ
ಕರ್ನಾಟಕದಲ್ಲಿ ಪ್ರಾಥಮಿಕ ಶಿಕ್ಷಣ ನೀತಿ
- ಪ್ರತಿ ಒಂದು ಮಗುವೂ ಶಾಲೆಗೆ ಹಾಜರಾಗುವುದು.
- ಪ್ರತಿ ಒಂದು ಮಗುವೂ ಕನಿಷ್ಠ ಕಲಿಕಾ ಮಟ್ಟವನ್ನು ಸಾಧಿಸುವುದು.
- ಪ್ರತಿ ಒಬ್ಬ ಶಿಕ್ಷಕರೂ ಶಾಲೆಗೆ ಹಾಜರಾಗುವುದು
- ಪ್ರಾಥಮಿಕ ಶಿಕ್ಷಣವನ್ನು ಉತ್ತೇಜಿಸಲು ಸಮುದಾಯವನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು.
ಪ್ರಾಥಮಿಕ ಶಿಕ್ಷಣದ ಧ್ಯೇಯ ಮತ್ತು ಉದ್ದೇಶಗಳು
ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರಿಕರಣಗೊಳಿಸಲು ಕರ್ನಾಟಕ ಸರ್ಕಾರವು ಕೆಳಕಂಡ ಧ್ಯೇಯೋದ್ಧೇಶಗಳನ್ನು ಹೊಂದಿದೆ:
- 06 ರಿಂದ 14 ವರ್ಷ ವಯಸ್ಸಿನ ಎಲ್ಲಾ ಮಕ್ಕಳು 1 ರಿಂದ 8ನೇ ತರಗತಿಯಲ್ಲಿರುವುದನ್ನು ಖಾತ್ರಿ ಪಡಿಸುವುದು.
- 08 ವರ್ಷಗಳ ಉಚಿತ ಕಡ್ಡಾಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಅಗತ್ಯವಿರುವ ಮೂಲಭೂತ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲಗಳನ್ನು ಒದಗಿಸುವುದು.
- ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧಿಸಲು ಶಿಕ್ಷಣವನ್ನು ಸಾಧನವನ್ನಾಗಿ ರೂಪಿಸುವುದು.
- ಕಲಿಕಾ ಪ್ರಕ್ರಿಯೆಯನ್ನು ಸ್ಥಳೀಯವಾಗಿ ಶಿಶುಕೇಂದ್ರಿತ ಚಟುವಟಿಕಾಧಾರಿತ ಹಾಗೂ ಸಂತಸದಾಯಕವಾಗಿರುವಂತೆ ಮಾಡುವುದು.
- ಶೈಕ್ಷಣಿಕ ಆಡಳಿತವನ್ನು ವಿಕೇಂದ್ರೀಕರಿಸಿ, ಸಮುದಾಯದ ಒಡೆತನದೊಂದಿಗೆ ಮಕ್ಕಳ ಶಿಕ್ಷಣ ಹಕ್ಕನ್ನು ಪೂರೈಸುವುದು.
ಮೂಲ: ಕರ್ನಾಟಕದಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ
ಕೊನೆಯ ಮಾರ್ಪಾಟು : 6/19/2020
0 ರೇಟಿಂಗ್ಗಳು ಮತ್ತು 0 ಕಾಮೆಂಟ್ಗಳು
ಸ್ಟಾರ್ಗಳನ್ನು ಜಾರಿಸಿ ನಂತರ ಕ್ಲಿಕ್ ಮಾಡಿ
© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.