ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಆರೋಗ್ಯ / ಮಾನಸಿಕ ಆರೋಗ್ಯ / ಜನನಿ ಸುರಕ್ಷಾ ಯೋಜನೆ
ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಜನನಿ ಸುರಕ್ಷಾ ಯೋಜನೆ

ಜನನಿ ಸುರಕ್ಷಾ ಯೋಜನೆ

ಉದ್ದೇಶ ಮತ್ತು  ಅರ್ಹತೆ

ಜನನಿ ಸುರಕ್ಷಾ ಯೋಜನೆಯ ಉದ್ದೇಶ ಮತ್ತು ಪಡೆಯಲು ಇರುವ ಅರ್ಹತೆಗಳೇನು?

ಉತ್ತರ : ಈ ಯೋಜನೆಯನ್ನು ಬಡತನ ರೇಖೆಗಿಂತ ಕೆಳಗಿನ ಆದಾಯವಿರುವ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ತಾಯಿ ಮತ್ತು ಮಕ್ಕಳ ಮರಣವನ್ನು ತಗ್ಗಿಸಲು ಹಮ್ಮಿಕೊಳ್ಳಲಾಗಿದೆ.

ಯೋಜನೆಯ ಫಲಾನುಭವಿಗಳಿಗೆ ಇರಬೇಕಾದ ಅರ್ಹತೆ:

  1. ಬಿ.ಪಿ.ಎಲ್. ಕುಟುಂಬದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗರ್ಭಿಣಿಯರು.
  2. ಅವರುಗಳ ವಯಸ್ಸು ಕನಿಷ್ಟ 19 ವರ್ಷ ಆಗಿರಬೇಕು. ಈ ಸೌಲಭ್ಯ ಮೊದಲ ಎರಡು ಸಜೀವ ಜನನಗಳಿಗೆ ಮಾತ್ರ ಮೀಸಲು.
  3. ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು ಅಥವಾ ಅವರ ಕುಟುಂಬದ ವಾರ್ಷಿಕ ಆದಾಯ ರೂ.17,000/- ಗಳಿಗಿಂತ ಕಡಿಮೆ ಎಂದು ದೃಢೀಕರಣ ಪತ್ರ ನೀಡಬೇಕು.

ಸಹಾಯ ಧನ

ರಾಷ್ಟ್ರೀಯ ಮಾತೃತ್ವ ಹಿತದೃಷ್ಠಿಯ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶಗಳ ಫಲಾನುಭವಿಗಳಿಗೆ ಈ ಕೆಳಗಿನಂತೆ  ನಗದು ಸಹಾಯವನ್ನು ನೀಡಲಾಗುವುದು.

ವಿವರ

ಸಾಂಸ್ಥಿಕ ಹೆರಿಗೆ ನಗದು ನೆರವು (ರೂ.)

ವರ್ಗ

ಗ್ರಾಮೀಣ ಪ್ರದೇಶ

ನಗರ ಪ್ರದೇಶ

 

ತಾಯಿಯ ಪ್ಯಾಕೇಜ್

ಆಶಾ ಪ್ಯಾಕೇಜ್ *

ತಾಯಿಯ ಪ್ಯಾಕೇಜ್

ಆಶಾ ಪ್ಯಾಕೇಜ್ **

LPS

1400

600

1000

400

HPS

700

600

600

400

ಈ ಸೌಲಭ್ಯ ಪಡೆಯಲು ಗರ್ಭಿಣಿಯರು ಆರೋಗ್ಯ ಕಾರ್ಯಕರ್ತೆಯರಲ್ಲಿ ನೋಂದಾಯಿಸಿಕೊಳ್ಳಬೇಕು. ಕಡೇ ಪಕ್ಷ ಮೂರು ಬಾರಿ ಪರೀಕ್ಷೆ ಮಾಡಿಸಿಕೊಂಡಿರಬೇಕು. ಹೆರಿಗೆಗೆ ಮೊದಲ ಎರಡು ಬಾರಿ ಧನುರ್ವಾಯು ಲಸಿಕೆ ಮತ್ತು ಕಬ್ಬಿಣಾಂಶ ಮಾತ್ರೆಗಳನ್ನು ಪಡೆದುಕೊಂಡಿರಬೇಕು.

ಮೂಲ : ಕುಟುಂಬ ವಾರ್ತೆ

2.87209302326
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top