ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ರಕ್ತ ದಾನ ಮಹಾದಾನ

ರಕ್ತ ದಾನ ಮಹಾದಾನ: ಆರೋಗ್ಯಕ್ಕೆ ಒಳಿತೇ ಹೊರತು ಕೆಟ್ಟದ್ದಿಲ್ಲ

 

ಭಾರತದಲ್ಲಿ ಬಹುಮಟ್ಟಿನ ಜನರು ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.
1. ರಕ್ತದಾನ ಒಬ್ಬರ ಜೀವ ಉಳಿಸುತ್ತದೆ. ರಕ್ತ ದಾನ ಒಬ್ಬರ ಜೀವವನ್ನು ಉಳಿಸುತ್ತದೆ. ಅದಕ್ಕೆ ಯಾವುದೇ ಪರ್ಯಾಯವಿಲ್ಲ. ಕೇವಲ ಒಂದು ದಾನವು ನಾಲ್ವರ ಜೀವವನ್ನು ಉಳಿಸುತ್ತದೆ.
2. ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. ಇದು ಲಿವರ್, ಹೃದಯ ಮತ್ತು ಪಿತ್ತಜನಕಾಂಗದಲ್ಲಿ ಶೇಖರಣೆಯಾಗಿ ಹೃದಯಬೇನೆ, ರಕ್ತದೊತ್ತಡ ಉಲ್ಬಣವಾಗುತ್ತದೆ.
ನಾವು ರಕ್ತದಾನ ಮಾಡಿದರೆ ಈ ವಿಷಯಗಳು ಇತ್ಯರ್ಥವಾಗುತ್ತದೆ.
3. ನೀವು ತಪಾಸಣೆ ಅವಕಾಶ ಪಡೆಯುತ್ತೀರಿ. ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟರಾಲ್, ಹೇಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ. ರಕ್ತದಾನ ಮಾಡುವ ಮೂಲಕ ನಿಮ್ಮ ಆರೋಗ್ಯದ ಜಾಡು ಹಿಡಿಯಬಹುದು ಮತ್ತು ಆಹಾರ, ವ್ಯಾಯಾಮ, ಜೀವನಶೈಲಿ ಬದಲಾವಣೆ ಮತ್ತಿತರ ಅಂಶಗಳು ಹೇಗೆ ದೇಹದ ಮೇಲೆ ಪರಿಣಾಮ ಬೀರುತ್ತದೆಂದು ತಿಳಿಯಬಹುದು.

4. ರಕ್ತದ ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ. ರಕ್ತದಾನ ಮಾಡುವುದರಿಂದ ರಕ್ತಕ್ಯಾನ್ಸರ್ ಅಪಾಯ ತಗ್ಗುತ್ತದೆಂದು ಸಂಶೋಧಕರು ಪತ್ತೆಹಚ್ಚಿದ್ದಾರೆ.  ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ.
ರಕ್ತದಾನದಿಂದ ನಿಮಗೇನೂ ನಷ್ಟವಾಗುವುದಿಲ್ಲ. ಆದರೆ ನಿಮ್ಮ ಆರೋಗ್ಯ ಮತ್ತು ಸಮುದಾಯದ ಆರೋಗ್ಯದ ಅನುಕೂಲಗಳು ಬೆಲೆಕಟ್ಟಲಾಗದ್ದು.

 

 

ಮೂಲ : ವೆಬ್ ದುನಿಯಾ

2.9793814433
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top