ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು:- 6ನೇ ತರಗತಿಯಿಂದ 10ನೇ ತರಗತಿಯ ವರೆಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ತೆರೆಯಲಾಗಿವೆ. 6ನೇ ತರಗತಿಯಿಂದ 10ನೇ ತರಗತಿಯ ವರೆಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿವೆ. ಅರ್ಹತೆ:- ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ವಿಧಾನ:- ನಿಗಧಿತ ಅರ್ಜಿಯನ್ನು ಭರ್ತಿ ಮಾಡಿ, ವಿದ್ಯಾ ಸಂಸ್ಥೆಯ ಮುಖ್ಯಸ್ಥರ ಮೂಲಕ ಸಂಬಂದಿಸಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮಂಜೂರಾತಿಗಾಗಿ ಕಳುಹಿಸುವುದು. ದಾಖಲೆಗಳು:- ವಿದ್ಯಾ ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಅದ್ಯಯನದ ಪ್ರವಾಸದ ವಿವರಗಳನ್ನು ಲಗತ್ತಿಸುವುದು. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಗಳು:- ಮೆಟ್ರಿಕ್ ನಂತರ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ಕಿತ್ತೂರು ರಾಣಿ ಚೆನ್ನಮ್ಮ ಪದವಿ ಪೂರ್ವ ವಸತಿ ಕಾಲೇಜುಗಳನ್ನು ತೆರೆಯಲಾಗಿವೆ. ಮೆಟ್ರಿಕ್ ನಂತರ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳನ್ನು ತೆರೆಯಲಾಗಿವೆ. ಅರ್ಹತೆ:- ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ವಿಧಾನ:- ನಿಗಧಿತ ಅರ್ಜಿಯನ್ನು ಭರ್ತಿ ಮಾಡಿ, ವಿದ್ಯಾ ಸಂಸ್ಥೆಯ ಮುಖ್ಯಸ್ಥರ ಮೂಲಕ ಸಂಬಂದಿಸಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮಂಜೂರಾತಿಗಾಗಿ ಕಳುಹಿಸುವುದು. ದಾಖಲೆಗಳು:- ವಿದ್ಯಾ ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಅದ್ಯಯನದ ಪ್ರವಾಸದ ವಿವರಗಳನ್ನು ಲಗತ್ತಿಸುವುದು. ಮೈಸೂರಿನ ರಾಮಕೃಷ್ಣ ಆಶ್ರಮ, ಜೆ.ಎಸ್.ಎಸ್. ಮತ್ತು ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರಗಳಲ್ಲಿ 5ನೇ ತರಗತಿಯಿಂದ ಪ್ರವೇಶಾವಕಾಶವಿರುತ್ತದೆ. :- ವಿದ್ಯಾರ್ಥಿಯೂ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ.2.50 ಲಕ್ಷ ಮೀರಿರಬಾರದು. ಹಿಂದಿನ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿ ವರ್ಷ ಏಪ್ರಿಲ್ ಮಾಹೆಯಲ್ಲಿ ನಡೆಸುವ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸದರಿ ಸಂಸ್ಥೆಗಳ ಎಲ್ಲಾ ಶಾಲಾ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸುವುದು. ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸುವುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ:- 5 ರಿಂದ 10ನೇ ತರಗತಿಯವರೆಗೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಊಟ ಮತ್ತು ವಸತಿ ಸೌಲಭ್ಯ ಒದಗಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿವೆ. 5ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಮುಖ್ಯೋಪಾದ್ಯಾಯರ ಮೂಲಕ ಅರ್ಜಿಯನ್ನು ಜೂನ್-15ರೊಳಗೆ ಸಂಬಂದಿಸಿದ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಕಳುಹಿಸಬೇಕು. ನಿಲಯಗಳಲ್ಲಿ ಪ್ರವೇಶ ಪಡೆದು ಉತ್ತೀರ್ಣರಾಗುವ ವಿದ್ಯಾರ್ಥಿಗಳನ್ನು ನಿಲಯ ವಾಸಿಗಳಾಗಿ ಮುಂದುವರೆಸಲಾಗುವುದು. ಹೊಸದಾಗಿ ವಸತಿ ನಿಲಯಗಳಿಗೆ ಸೇರಲು ಬಯಸುವ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ವಿಶೇಷ ಭೋದನೆ ನೀಡಲಾಗುವುದು (ವಿಜ್ಞಾನ, ಗಣಿತ, ಇಂಗ್ಲೀಷ್ ಮತ್ತು ಸಮಾಜ). ಕಾಲೇಜು ವಿದ್ಯಾರ್ಥಿ ನಿಲಯಗಳು:- ಪಿ.ಯು.ಸಿ ಮತ್ತು ಪದವಿ ತರಗತಿಗಳಿಗೆ ಸೇರಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಊಟ ಮತ್ತು ವಸತಿ ಸೌಲಭ್ಯ ಒದಗಿಸಲು ಪಿ.ಯು.ಸಿ ಮತ್ತು ಪದವಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿವೆ. ಪಿ.ಯು.ಸಿ ತರಗÀತಿಗೆ ದಾಖಲಾದ ವಿದ್ಯಾರ್ಥಿಗಳು ಪ್ರಾಂಶುಪಾಲರ ಮೂಲಕ ಅರ್ಜಿಯನ್ನು ಜೂನ್-15ರೊಳಗೆ ಸಂಬಂದಿಸಿದ ತಾಲ್ಲೂಕು/ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಕಳುಹಿಸಬೇಕು. ನಿಲಯಗಳಲ್ಲಿ ಪ್ರವೇಶ ಪಡೆದು ಉತ್ತೀರ್ಣರಾಗುವ ವಿದ್ಯಾರ್ಥಿಗಳನ್ನು ನಿಲಯ ವಾಸಿಗಳಾಗಿ ಮುಂದುವರೆಸಲಾಗುವುದು. ಹೊಸದಾಗಿ ವಸತಿ ನಿಲಯಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳು ಅರ್ಜಿಗಳನ್ನು ಪ್ರಾಂಶುಪಾಲರ ಮೂಲಕ ಸಲ್ಲಿಸಬೇಕು. ವಿದ್ಯಾರ್ಜನೆಗಾಗಿ ಪ್ರೋತ್ಸಾಹ ಧನ:- ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಮತ್ತು ಪದವಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಸಿಗದೇ ಇದ್ದಲ್ಲಿ, ಪ್ರತಿ ಮಾಹೆಗೆ ರೂ.1500/- ರಂತೆ 10 ತಿಂಗಳುಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಇರುತ್ತದೆ. ಅಂತಹ ವಿದ್ಯಾರ್ಥಿಗಳು ಪ್ರಾಂಶುಪಾಲರ ಮೂಲಕ ಸಮಾಜ ಕಲ್ಯಾಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಮೂಲ : ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ