অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಮಕ್ಕಳ ಅಬಿವೃದ್ದಿ ಕಾರ್ಯಕ್ರಮಗಳು

ಮಕ್ಕಳ ಅಬಿವೃದ್ದಿ ಕಾರ್ಯಕ್ರಮಗಳು

2001 ರ ಜನಗಣತಿಯ ಪ್ರಕಾರ ರಾಜ್ಯದ 52.734 ಮಿಲಿಯನ್ ಜನ ಸಂಖ್ಯೆಯಲ್ಲಿ 0 ಯಿಂದ 6ರ ವಯೋಮಿತಿಯೊಳಗಿನ ಮಕ್ಕಳ ಸಂಖ್ಯೆ ಒಟ್ಟು ಜನ ಸಂಖ್ಯೆಯ ಶೇಕಡ 12.94ರಷ್ಟು ಇರುತ್ತದೆ. ಖಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯಖ ಎಂಬ  ದೂರದೃಷ್ಠಿಯ ಪ್ರಕಾರ, ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು ಮಕ್ಕಳ ಪರಿಪೂರ್ಣ ಅಬಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಇದು ಮಕ್ಕಳ ಹಕ್ಕುಗಳನ್ನು ರಕ್ಷಣೆಮಾಡಲು, ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು ಹಾಗು ಮಕ್ಕಳ ಪೋಷಣೆ ಮತ್ತು ಪಾಲನೆಯು ಸೇರಿರುತ್ತದೆ2001 ರ ಜನಗಣತಿಯ ಪ್ರಕಾರ ರಾಜ್ಯದ 52.734 ಮಿಲಿಯನ್ ಜನ ಸಂಖ್ಯೆಯಲ್ಲಿ 0 ಯಿಂದ 6ರ ವಯೋಮಿತಿಯೊಳಗಿನ ಮಕ್ಕಳ ಸಂಖ್ಯೆ ಒಟ್ಟು ಜನ ಸಂಖ್ಯೆಯ ಶೇಕಡ 12.94ರಷ್ಟು ಇರುತ್ತದೆ. ಖಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯಖ ಎಂಬ  ದೂರದೃಷ್ಠಿಯ ಪ್ರಕಾರ, ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು ಮಕ್ಕಳ ಪರಿಪೂರ್ಣ ಅಬಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಇದು ಮಕ್ಕಳ ಹಕ್ಕುಗಳನ್ನು ರಕ್ಷಣೆಮಾಡಲು, ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು ಹಾಗು ಮಕ್ಕಳ ಪೋಷಣೆ ಮತ್ತು ಪಾಲನೆಯು ಸೇರಿರುತ್ತದೆ.

ಸಮಗ್ರ ಶಿಶು ಅಬಿವೃದ್ದಿ ಯೋಜನೆಃ

ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ  ದೂರದೃಷ್ಠಿಯ ಹಿನ್ನೆಲೆಯಲ್ಲಿ, ಇಲಾಖೆಯು  ಮಕ್ಕಳ ಕಲ್ಯಾಣ ಮತ್ತು ಅಬಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ   ಅನುಷ್ಠಾನಕ್ಕೆ  ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ, ಆಥರ್ಿಕ ಬೆಳವಣಿಗೆಗೆ ಹೂಡುತ್ತಿರುವ ಬಂಡವಾಳವಾಗಿರುತ್ತದೆ.

ಕನರ್ಾಟಕ ರಾಜ್ಯದಲ್ಲಿ ಸಮಗ್ರ ಶಿಶು ಅಬಿವೃದ್ದಿ ಯೋಜನೆಯನ್ನು  ಪ್ರಾಯೋಗಿಕವಾಗಿ 2ನೇ ಅಕ್ಟೋಬರ್ 1975 ರಂದು ಮೈಸೂರು ಜಿಲ್ಲೆಯ, ಟಿ. ನರಸೀಪುರ ತಾಲ್ಲೂಕಿನಲ್ಲಿ 100 ಅಂಗನವಾಡಿ  ಕೇಂದ್ರಗಳೊಂದಿಗೆ   ಪ್ರಾರಂಬಿಸಲಾಯಿತು. ಈಗ ರಾಜ್ಯದ ಎಲ್ಲಾ ಕತಾಲ್ಲೂಕುಗಳಿಗೆ  ವಿಸ್ತರಿಸಲಾಗಿದೆ. ಗಬರ್ಿಣಿ, ಬಾಣಂತಿ, ಕಿಶೋರಿಯರು ಮತ್ತು 6 ವರ್ಷ  ಒಳಗಿನ ಮಕ್ಕಳ  ಕಲ್ಯಾಣವು  ಈ ಯೋಜನೆಯ ಮುಖ್ಯ  ಗುರಿಯಾಗಿರುತ್ತದೆ.

ಯೋಜನೆಯ ಉದ್ದೇಶ

  • 0-6 ವರ್ಷದ ಮಕ್ಕಳ ಆರೋಗ್ಯ, ಪೌಷ್ಠಿಕ ಮಟ್ಟವನ್ನು ವೃದ್ಧಿಸುವುದು.
  • ಮಗುವಿನ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಭದ್ರ ಅಡಿಪಾಯ ಹಾಕುವುದು.
  • ಮಕ್ಕಳಲ್ಲಿ ಸಾವು, ಅನಾರೋಗ್ಯ, ಅಪೌಷ್ಠಿಕತೆ ಮತ್ತು ಶಾಲಾ ಬಿಡುವಿಕೆಯನ್ನು   ಕಡಿಮೆಗೊಳಿಸುವುದು.
  • ಶಿಶು ಅಬಿವೃದ್ಧಿ ಕಾರ್ಯಕ್ರಮವನ್ನು ಉತ್ತಮಗೊಳಿಸುವ ಕಾರ್ಯನೀತಿ ಮತ್ತು  ಅನುಷ್ಠಾನಗೊಳಿಸುವ  ದಿಸೆಯಲ್ಲಿ ಪರಿಣಾಮಕಾರಿಯಾದ ಸಮನ್ವಯತೆಯನ್ನು ಸಾದಿಸುವುದು.
  • ಆರೋಗ್ಯ ಮತ್ತು ಪೌಷ್ಠಿಕತೆಯ ಶಿಕ್ಷಣವನ್ನು ನೀಡುವುದರ  ಮೂಲಕ ತಾಯಂದಿರಲ್ಲಿ ತಮ್ಮ ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕತೆಯ  ಅಗತ್ಯಗಳನ್ನು ಸರಿಯಾಗಿ ನೋಡಿಕೊಳ್ಳುವ ಸಾಮಥ್ರ್ಯವನ್ನು ಹೆಚ್ಚಿಸುವುದು

ಕೊನೆಯ ಮಾರ್ಪಾಟು : 7/22/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate