ಈ ಯೋಜನೆಯಡಿ ಗ್ರಾಮಾಂತರ ಪ್ರದೇಶಗಳಲ್ಲಿ ವ್ಯವಸಾಯ ಹಾಗೂ ಇನ್ನಿತರ ವೃತ್ತಿನಿರತ ಮಹಿಳೆಯರ ಮಕ್ಕಳಿಗೆ ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಬಿಸಲು ಮಹಿಳಾ ಮಂಡಲಗಳಿಗೆ ಮತ್ತು ಸ್ವಯಂ ಸೇವಾ ಸಂಸ್ಥೆಗಳಿಗೆ ಜಿಲ್ಲಾ ಪಂಚಾಯತಿ ಮೂಲಕ ಅನುದಾನವನ್ನು ನೀಡಲಾಗುತ್ತಿದೆ. ಈ ಯೋಜನೆಯಲ್ಲಿ 3 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಮಕ್ಕಳಿಗೆ ದಿನದ ವೇಳೆಯಲ್ಲಿ ಸೇವೆಗಳನ್ನು ಒದಗಿಸುತ್ತದೆ. ಈ ಸೇವೆಗಳು ಆರೋಗ್ಯ, ಆರೈಕೆ, ಪೂರಕ ಪೌಷ್ಠಿಕ ಆಹಾರ, ಚುಚ್ಚುಮದ್ದು, ಆಟಿಕೆಗಳು, ಮನೋರಂಜನೆ ಮುಂತಾದವುಗಳನ್ನು ಒಳಗೊಂಡಿರುತ್ತದೆ.
ಕೊನೆಯ ಮಾರ್ಪಾಟು : 10/15/2019