ಪ್ರಾಥಮಿಕ ಶಿಕ್ಷಣ ನೀತಿ ಕರ್ನಾಟಕದಲ್ಲಿ ಪ್ರಾಥಮಿಕ ಶಿಕ್ಷಣ ನೀತಿ ಪ್ರತಿ ಒಂದು ಮಗುವೂ ಶಾಲೆಗೆ ಹಾಜರಾಗುವುದು. ಪ್ರತಿ ಒಂದು ಮಗುವೂ ಕನಿಷ್ಠ ಕಲಿಕಾ ಮಟ್ಟವನ್ನು ಸಾಧಿಸುವುದು. ಪ್ರತಿ ಒಬ್ಬ ಶಿಕ್ಷಕರೂ ಶಾಲೆಗೆ ಹಾಜರಾಗುವುದು ಪ್ರಾಥಮಿಕ ಶಿಕ್ಷಣವನ್ನು ಉತ್ತೇಜಿಸಲು ಸಮುದಾಯವನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು. ಪ್ರಾಥಮಿಕ ಶಿಕ್ಷಣದ ಧ್ಯೇಯ ಮತ್ತು ಉದ್ದೇಶಗಳು ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರಿಕರಣಗೊಳಿಸಲು ಕರ್ನಾಟಕ ಸರ್ಕಾರವು ಕೆಳಕಂಡ ಧ್ಯೇಯೋದ್ಧೇಶಗಳನ್ನು ಹೊಂದಿದೆ: 06 ರಿಂದ 14 ವರ್ಷ ವಯಸ್ಸಿನ ಎಲ್ಲಾ ಮಕ್ಕಳು 1 ರಿಂದ 8ನೇ ತರಗತಿಯಲ್ಲಿರುವುದನ್ನು ಖಾತ್ರಿ ಪಡಿಸುವುದು. 08 ವರ್ಷಗಳ ಉಚಿತ ಕಡ್ಡಾಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಅಗತ್ಯವಿರುವ ಮೂಲಭೂತ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲಗಳನ್ನು ಒದಗಿಸುವುದು. ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧಿಸಲು ಶಿಕ್ಷಣವನ್ನು ಸಾಧನವನ್ನಾಗಿ ರೂಪಿಸುವುದು. ಕಲಿಕಾ ಪ್ರಕ್ರಿಯೆಯನ್ನು ಸ್ಥಳೀಯವಾಗಿ ಶಿಶುಕೇಂದ್ರಿತ ಚಟುವಟಿಕಾಧಾರಿತ ಹಾಗೂ ಸಂತಸದಾಯಕವಾಗಿರುವಂತೆ ಮಾಡುವುದು. ಶೈಕ್ಷಣಿಕ ಆಡಳಿತವನ್ನು ವಿಕೇಂದ್ರೀಕರಿಸಿ, ಸಮುದಾಯದ ಒಡೆತನದೊಂದಿಗೆ ಮಕ್ಕಳ ಶಿಕ್ಷಣ ಹಕ್ಕನ್ನು ಪೂರೈಸುವುದು. ಮೂಲ: ಕರ್ನಾಟಕದಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ