ಈ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಜನರು ಹೆಚ್ಚಾಗಿ ವಾಸಿಸುವ ಗ್ರಾಮ/ಸ್ಥಳಗಳನ್ನು ಆಯ್ಕೆ ಮಾಡಿ ಜಿಲ್ಲಾ ಪಂಚಾಯತ್ ಸಹಕಾರದೊಂದಿಗೆ ಜಿಲ್ಲಾ ವಲಯದಲ್ಲಿ ಒದಗಿಸಿರುವ ಅನುದಾನವನ್ನು ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಸರಬರಾಜು, ಚರಂಡಿ, ರಸ್ತೆ, ಸಮುದಾಯ ಭವನ, ಕಾಲೋನಿಗಳಿಗೆ ಸಂಪರ್ಕ ರಸ್ತೆ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಂಡು ಸೌಲಭ್ಯಗಳನ್ನು ಒದಗಿಸಲಾಗುವುದು. ಮೂಲ : ಸಮಾಜ ಕಲ್ಯಾಣ ಇಲಾಖೆ,ಮಂಗಳೂರು